ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ-ಬಾಂಬ್ ಇಟ್ಟವನ ಗುರುತು ಪತ್ತೆ ಮಾಡಿದ ಎನ್‌ಐಎ?

ಮಂಗಳೂರು(ಬೆಂಗಳೂರು): ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು, ಬಾಂಬ್ ಇರಿಸಿದ್ದ ಶಂಕಿತ ಹಾಗೂ ಆತನಿಗೆ ಸಹಾಯ ಮಾಡಿದ್ದ ಶಂಕಿತನ ಗುರುತು ಪತ್ತೆ ಮಾಡಿರುವುದಾಗಿ ತಿಳಿದುಬಂದಿದೆ.

‘ಭಯೋತ್ಪಾದನಾ ಸಂಘಟನೆ ಜೊತೆ ಒಡನಾಟವಿಟ್ಟುಕೊಂಡು ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮುಸಾವೀರ್ ಹುಸೇನ್ ಶಾಜೀಬ್ ಎಂಬಾತನೇ ಬಾಂಬ್‌ ಇರಿಸಿರುವ ಅನುಮಾನ ದಟ್ಟವಾಗಿದೆ. ‘ಮುಸಾವೀರ್‌ಗೆ ತೀರ್ಥಹಳ್ಳಿಯವನಾದ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಸಹ ಸಹಕಾರ ನೀಡಿರುವ ಮಾಹಿತಿ ಇದೆ. ಆದರೆ, ಈತ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದಾನೆ. ಇಬ್ಬರ ಪತ್ತೆಗೆ ಬಹುಮಾನ ಸಹ ಘೋಷಿಸಲಾಗಿದ್ದು, ಪತ್ತೆಗೆ ತನಿಖೆ ಮುಂದುವರಿಸಲಾಗಿದೆ ಎಂದು ತನಿಖಾ ತಂಡದ ಮೂಲಗಳು ಹೇಳಿವೆ. ಸದ್ಯ ಜೈಲಿನಲ್ಲಿರುವ ಮಾಝ್‌ ಮುನೀರ್ ಅಹ್ಮದ್‌ ಹಾಗೂ ಇತರರ ಜೊತೆಗೆಯೂ ಮುಸಾವೀರ್ ಒಡನಾಟವಿಟ್ಟುಕೊಂಡಿದ್ದ ಎಂದು ಮೂಲಗಳು ಹೇಳಿವೆ.

LEAVE A REPLY

Please enter your comment!
Please enter your name here