ಯುವತಿಗೆ ಮನಬಂದಂತೆ ಚಾಕು ಇರಿದ ಕಿಡಿಗೇಡಿ ಯುವಕ-ದಾರಿಹೋಕರಿಂದ ಪ್ರಾಣ ರಕ್ಷಣೆ-ಸಿಸಿಟಿವಿ ವಿಡಿಯೋ

ಮಂಗಳೂರು(ನವದೆಹಲಿ): ನವದೆಹಲಿಯ ಮುಖರ್ಜಿ ನಗರ ಪ್ರದೇಶದಲ್ಲಿ ಹಾಡಹಗಲೇ ಯುವತಿಯೊಬ್ಬಳ ಮೇಲೆ ಕಿಡಿಗೇಡಿ ಯುವಕ ಮನಬಂದಂತೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. 22 ವರ್ಷದ ಅಮನ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 22ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿ ಯುವಕ, ಯುವತಿ ಮೇಲೆ ಚಾಕುವಿನಿಂದ ಹಲವು ಬಾರಿ ಇರಿದಿರುವುದನ್ನು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದಾರಿಹೋಕರು ಮಧ್ಯಪ್ರವೇಶಿಸಿ ಆರೋಪಿಯನ್ನು ಹಿಡಿಯಲು ಯತ್ನಿಸಿದ್ದಾರೆ. ಆದರೆ ಇದರಿಂದ ಭಯಗೊಂಡ ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here