ದಕ್ಷಿಣ ಕನ್ನಡ ಕಾಂಗ್ರೆಸ್‍ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ರಮಾನಾಥ ರೈ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ಸದರಿ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಗಳನ್ನು ಯಶಸ್ವಿಗೊಳಿಸಲು ಎಲ್ಲಾ ರೀತಿಯಲ್ಲಿ ಸಹಕಾರ ನೀಡಲು ಕೋರುತ್ತೇನೆ ಎಂದು ಡಿಕೆಶಿ ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here