ಮಂಗಳೂರು: ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಿದ್ದು, ಮಾ.25ರಂದು ಸೋಮವಾರ ಪ್ರಥಮ ಭಾಷೆಯಾದ ಕನ್ನಡ ಪರೀಕ್ಷೆ ನಡೆಯಿತು.
ಜಿಲ್ಲೆಯಲ್ಲಿ ಒಟ್ಟು 28,866 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, ಅದರಲ್ಲಿ 28,537 ವಿದ್ಯಾರ್ಥಿಗಳು ಹಾಜರಾಗಿದ್ದರು. ಉಳಿದ 329 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.