ಲೋಕಸಭಾ ಚುನಾವಣೆ – 3 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಜೆಡಿಎಸ್‌

ಮಂಗಳೂರು/ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಪಕ್ಷವು ತನ್ನ ಪಾಲಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಮಂಡ್ಯದಿಂದ ಮಾಜಿ ಸಿಎಂ, ಜೆಡಿಎಸ್‌ ರಾಜಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸ್ಪರ್ಧಿಸಿದರೆ, ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುವ ಹಾಸನದಿಂದ ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ನೀಡಲಾಗಿದೆ. ಕೋಲಾರದಿಂದ ಮಲ್ಲೇಶ್‌ ಬಾಬು ಅವರಿಗೆ ಜೆಡಿಎಸ್ ಟಿಕೆಟ್‌ ನೀಡಿದೆ.

LEAVE A REPLY

Please enter your comment!
Please enter your name here