



ಮಂಗಳೂರು(ಬೆಂಗಳೂರು): ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕೋಲಾರದ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಸಚಿವ ಕೆ.ಹೆಚ್ ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಲೋಕಸಭೆ ಟಿಕೆಟ್ ನೀಡಬಾರದು ಎಂಬುದು ಶಾಸಕರ ಬೇಡಿಕೆಯಾಗಿದೆ.







ರಾಜೀನಾಮೆ ಸಲ್ಲಿಸಲು ಸ್ಪೀಕರ್ ಯು.ಟಿ ಖಾದರ್ ಅವರ ಸಮಯ ಕೇಳಿದ್ದಾರೆ ಎನ್ನಲಾಗಿದೆ. ರಮೇಶ್ ಕುಮಾರ್ ಬಣದ ಶಾಸಕರಾದ ಕೊತ್ತುರು ಮಂಜುನಾಥ್, ಸಚಿವ ಸುಧಾಕರ್, ನಜೀರ್ ಅಹ್ಮದ್, ಅನಿಲ್‌ಕುಮಾರ್ ಸೇರಿದಂತೆ ಐವರು ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ.















