ಮಂಗಳೂರು(ಬೆಂಗಳೂರು): ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದ್ದು, ವಿಧಾನ ಪರಿಷತ್ ನ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಅವರಿಗೆ ಪತ್ರ ಬರೆದಿರುವ ಅವರು ಸ್ವ ಇಚ್ಛೆಯಿಂದ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ.