ಪ್ರಥಮ ಪಿಯು ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಮಂಗಳೂರು(ಬೆಂಗಳೂರು): ಪ್ರಥಮ ಪಿಯು ಪೂರಕ ಪರೀಕ್ಷೆ ಮೇ 20 ರಿಂದ 31ರವರೆಗೆ ನಡೆಯಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್ ‍6 ರಂದು ಪರೀಕ್ಷೆಯ ಫಲಿತಾಂಶ ಪ್ರಕಟಿಸುವಂತೆ ಸೂಚನೆಯನ್ನು ನೀಡಿದೆ.

ಪಿಯುಸಿ ಪೂರಕ ಪರೀಕ್ಷೆಯನ್ನು ನಡೆಸಿಕೊಡುವ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಉಪನಿರ್ದೇಶಕರಿಗೆ ನೀಡಲಾಗಿದೆ. ಮಾರ್ಚ್ 30ಕ್ಕೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗುತ್ತಿದ್ದು ಈ ಸಮಯದಲ್ಲಿ ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಲು ಅನುವಾಗುವಂತೆ ಪ್ರತಿಯೊಂದು ಕಾಲೇಜುಗಳ ಸೂಚನಾ ಫಲಕದಲ್ಲಿ ಪೂರಕ ಪರೀಕ್ಷೆಗಳ ವಿವರಣೆಗಳನ್ನು ಪ್ರಕಟಿಸುವಂತೆ ಕೆಎಸ್ ಇಎಬಿ ಸೂಚನೆಯನ್ನು ನೀಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 22ರಂದು ಪೂರ್ಣಗೊಂಡಿದ್ದು, ಮೌಲ್ಯಮಾಪನ ಕಾರ್ಯ ಪ್ರಾರಂಭವಾಗಿದೆ. ಲೋಕಸಭಾ ಚುನಾವಣೆಗೂ ಮುನ್ನ ಫಲಿತಾಂಶ ಪ್ರಕಟವಾಗುವ ಸಾದ್ಯತೆ ಇದೆ.

LEAVE A REPLY

Please enter your comment!
Please enter your name here