ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ಮಂಗಳೂರು(ಬೆಂಗಳೂರು): ಲೋಕಸಭಾ ಟಿಕೆಟ್​​ ಕೈತಪ್ಪಿದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ.

ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆ ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ನಿರ್ಮಲ್‌ ಕುಮಾರ್ ‌ಸುರಾನಾ ಅವರನ್ನು ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಕೇರಳ, ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.

 

LEAVE A REPLY

Please enter your comment!
Please enter your name here