ಮಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಬಿಸಿಲು ಧಗೆ ಏರುತ್ತಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಲಕ್ಷಣ ಇಲ್ಲ ಎನ್ನಲಾಗಿದೆ.
ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಏಪ್ರಿಲ್ ಮೊದಲ ವಾರದವರೆಗೆ ಇದೇ ಹವಾಮಾನ ಮುಂದುವರಿಯುತ್ತದೆ. ಬಳಿಕ ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಭಾಗಗಳಲ್ಲಿ ಈಗಾಗಲೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಬೇಗ ಮಳೆ ಬಾರದಿದ್ದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತದೆ. ಕರಾವಳಿ ಭಾಗದಲ್ಲಿ ಕಳೆದ ವರ್ಷದಂತೆ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.