ರಾಜ್ಯದಲ್ಲಿ ಬಿರು ಬಿಸಿಲು-ಆರೋಗ್ಯ ಕಾಪಾಡಿಕೊಳ್ಳಲು ಮಾರ್ಗಸೂಚಿ ಪ್ರಕಟಿಸಿದ ಸರಕಾರ

ಮಂಗಳೂರು(ಬೆಂಗಳೂರು): ರಾಜ್ಯದಲ್ಲಿ ಈ ಬಾರಿ ಬಿಸಿಲ ಝಳ ತೀವ್ರವಾಗಿದೆ. ಮುಂದಿನ ಎರಡು ವಾರಗಳ ಕಾಲ ಬಿಸಿಲು, ಒಣ ಹವೆ ತೀವ್ರಗೊಳ್ಳಲಿದೆ. ತಾಪಮಾನ ಏರಿಕೆ ಹಿನ್ನೆಲೆಯಲ್ಲಿ ಎ. 15ರವರೆಗೂ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತಗಳಿಗೆ ಈಗಾಗಲೇ ಸೂಚಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಇಂದು ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದರೆ, ಮಂಗಳೂರಿನಲ್ಲಿ 31 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಬಿಸಿಲಿನ ಬೇಗೆಯಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಈ ಕುರಿತು ಸಲಹೆ, ಸೂಚನೆಗಳನ್ನು ಆರೋಗ್ಯ ಇಲಾಖೆ ತನ್ನ ʼಎಕ್ಸ್ʼ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಸರಕಾರದ ಮಾರ್ಗಸೂಚಿಯಲ್ಲೇನಿದೆ?:

  • ಹೆಚ್ಚು ನೀರನ್ನು ಕುಡಿಯಿರಿ. ಮಜ್ಜಿಗೆ/ ಎಳನೀರು, ಹಣ್ಣಿನ ರಸವನ್ನು ಹೆಚ್ಚಾಗಿ ಸೇವಿಸಬಹುದು.
  • ನೀರಿನ ಅಂಶ ಹೆಚ್ಚಾಗಿರುವ ತರಕಾರಿ, ಹಣ್ಣುಗಳನ್ನು ಸೇವಿಸುವುದು ಉತ್ತಮ.
  • ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಿರಿ, ಗಾಳಿಯಾಡುವ ಪಾದರಕ್ಷೆ ಧರಿಸಿ.
  • ಹೊರಗಡೆ ತೆರಳುವ ವೇಳೆ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮಗಳನ್ನು ಪಾಲಿಸಿ.
  • ರೇಡಿಯೊ, ದೂರದರ್ಶನ ಅಥವಾ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನ ಮಾಹಿತಿಯನ್ನು ಪಡೆದು, ಅದರಂತೆ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಿ.

LEAVE A REPLY

Please enter your comment!
Please enter your name here