ಈಸ್ಟರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಕಂದಕಕ್ಕೆ ಬಿದ್ದು 45 ಮಂದಿ ಸಾವು-ಘಟನೆಯಲ್ಲಿ ಬದುಕುಳಿದ ಏಕೈಕ ಮಗು

ಮಂಗಳೂರು(ದಕ್ಷಿಣ ಆಫ್ರಿಕಾ): ಈಸ್ಟರ್ ಹಬ್ಬಕ್ಕೆ ಜನರನ್ನು ಹೊತ್ತು ಸಂಚರಿಸುತ್ತಿದ್ದ ಬಸ್ ಭೀಕರ ರಸ್ತೆ ಅಪಘಾತಕ್ಕೊಳಗಾದ ಘಟನೆ ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಮಾ.28ರಂದು ನಡೆದಿದೆ. ಇಲ್ಲಿನ ಮಮಟ್ಲಕಲಾ ಸೇತುವೆಯಿಂದ ಸುಮಾರು 164 ಅಡಿಗಳಷ್ಟು ಆಳದಲ್ಲಿರುವ ಕಂದಕಕ್ಕೆ ಬಸ್ ಉರುಳಿ ಬಿದ್ದಿದೆ. ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, 45 ಜನರು ಮೃತಪಟ್ಟಿದ್ದಾರೆ ಎಂದು ದೇಶದ ಉತ್ತರ ಪ್ರಾಂತ್ಯದ ಲಿಂಪೊಪೊದಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಬದುಕುಳಿದ 8 ವರ್ಷದ ಮಗು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದೆ. ಈ ಘಟನೆ ಸಂಬಂಧ ತನಿಖೆ ನಡೆಯುತ್ತಿದೆ. ಬೆಂಕಿಯಲ್ಲಿ ಅನೇಕ ದೇಹಗಳು ಗುರುತಿಸಲಾಗದಷ್ಟು ಸುಟ್ಟು ಹೋಗಿದ್ದವು. ಕೆಲವು ಮೃತದೇಹಗಳು ವಾಹನದೊಳಗೆ ಸಿಲುಕಿಕೊಂಡಿದ್ದವು. ಈ ಬಸ್ ನೆರೆ ದೇಶ ಬೋಟ್ಸ್ವಾನಾದಿಂದ ಈಸ್ಟರ್ ತೀರ್ಥಯಾತ್ರೆಯನ್ನು ಆಯೋಜಿಸಲಾದ ಜನಪ್ರಿಯ ಮೋರಿಯಾ ಪಟ್ಟಣಕ್ಕೆ ಪ್ರಯಾಣಿಸುತ್ತಿತ್ತು ಎಂದು ಅಲ್ಲಿನ ಅಧಿಕಾರಿಗಳ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here