ಮಂಗಳೂರು (ಬೆಂಗಳೂರು): ಉತ್ತರ ಒಳನಾಡಿನ ಆರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬುರಗಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಯ ಒಂದೆರಡು ಕಡೆ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಂಭವವಿದೆ. ಮುಂದಿನ ಮೂರು ದಿನಗಳು ಒಳನಾಡಿನ ಒಂದೆರಡು ಕಡೆ ಗರಿಷ್ಠ ತಾಪಮಾನ 2–3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದೆ.