ಮಂಗಳೂರು (ತಮಿಳುನಾಡು): ತಮಿಳು ಸೇರಿದಂತೆ ಬಹುಭಾಷೆಗಳಲ್ಲಿ ಗುರುತಿಸಿಕೊಂಡಿದ್ದ ನಟ ಡೇನಿಯಲ್ ಬಾಲಾಜಿ ಮಾ.29ರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ನಟನಿಗೆ 48 ವರ್ಷ ವಯಸ್ಸಾಗಿತ್ತು. ತೀವ್ರ ಹೃದಯಾಘಾತಕ್ಕೊಳಗಾದ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವೆಟ್ಟೈಯಾಡು ವಿಲಯಾಡು ಚಿತ್ರದಲ್ಲಿನ ಅಮುಧನ್ ಮತ್ತು ವದ ಚೆನ್ನೈನಲ್ಲಿನ ತಂಬಿಯಂತಹ ಪಾತ್ರಗಳ ಮೂಲಕ ಗಮನ ಸೆಳೆದಿದ್ದರು. ಗಮನಾರ್ಹ ಚಿತ್ರಣಕ್ಕಾಗಿ ಗುರುತಿಸಲ್ಪಟ್ಟ ಬಾಲಾಜಿ ತಮ್ಮ ಅತ್ಯುತ್ತಮ ನಟನೆಯಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರರಾಗಿದ್ದರು. ಅಲ್ಲದೇ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಿರಾತಕ’ ಸೇರಿದಂತೆ ಕೆಲ ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು. ಎದೆನೋವಿನಿಂದ ಬಳಲುತ್ತಿದ್ದ ಡೇನಿಯಲ್ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ.