ಮಂಗಳೂರು: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ರಾಜ್ಯದಲ್ಲಿ ಏ.26 ಮತ್ತು ಮೇ.7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ.ಈ ಎರಡು ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ವ್ಯಾವಹಾರಿಕ ಸಂಸ್ಥೆ, ಔದ್ಯಮಿಕ ಸಂಸ್ಥೆ ಹಾಗೂ ಇನ್ನೀತರ ಸಂಸ್ಥೆಗಳಲ್ಲಿ ಖಾಯಂ ಮತ್ತು ದಿನಗೂಲಿ ಆದಾರದಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿರುವುದಾಗಿ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಮತದಾನದ ಹಕ್ಕನ್ನು ಹೊಂದಿರುವ ಪ್ರತಿಯೊಬ್ಬರು ಮತದಾನ ಮಾಡುವ ಉದ್ದೇಶದಿಂದ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.