15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ-100 ಯುನಿಟ್​​ಗಿಂತ ಹೆಚ್ಚು ಬಳಸುವವರಿಗೆ ಲಾಭ-ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ

ಮಂಗಳೂರು(ಬೆಂಗಳೂರು): ಲೋಕಸಭೆ ಚುನಾವಣೆ ಸಮಯದಲ್ಲಿ ಎಲ್ಲಾ ವರ್ಗದ ವಿದ್ಯುತ್​ ಬಳಕೆದಾರರಿಗೆ ಕರ್ನಾಟಕ ರಾಜ್ಯ ವಿದ್ಯುಚ್ಛಕ್ತಿ  ನಿಯಂತ್ರಣ ಆಯೋಗವು ಗುಡ್​ ನ್ಯೂಸ್​ ನೀಡಿದೆ. ಗೃಹ ಬಳಕೆಯಲ್ಲಿ 100 ಯುನಿಟ್​​ಗಿಂತ ಹೆಚ್ಚು ವಿದ್ಯುತ್​​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದ್ದು, ಈ ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದಿನಿಂದ(ಏ.1) ಜಾರಿಯಾಗಲಿದೆ. ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್​ ದರ ನಿಗದಿ ಮಾಡಿದೆ.

ಮೊದಲು 100ಕ್ಕಿಂತ ಹೆಚ್ಚು ಯುನಿಟ್​ ವಿದ್ಯುತ್​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​​ಗೆ 7 ರೂ. ನಿಗದಿ ಮಾಡಲಾಗಿತ್ತು. ಇದೀಗ 7 ರೂ. ಬದಲಿಗೆ ಪ್ರತಿ ಯುನಿಟ್​ಗೆ 5.90 ರೂ. ಮಾತ್ರ ಶುಲ್ಕ ವಿಧಿಸಲಾಗಿದೆ. ಇನ್ನು 100 ಯುನಿಟ್​ಗಿಂತ ಕಡಿಮೆ ವಿದ್ಯುತ್​ ಬಳಕೆ ಮಾಡುವವರು ಈಗಾಗಲೆ ಪ್ರತಿ ಯುನಿಟ್​ಗೆ 4.75 ರೂ. ಪಾವತಿಸುತ್ತಿದ್ದಾರೆ. ಆದರೆ ಸರ್ಕಾರ 200 ಯುನಿಟ್​ ಒಳಗೆ ಬಳಸುವವರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್​ ನೀಡುವುದರಿಂದ ಈ ಸೌಲಭ್ಯಕ್ಕೆ ನೋಂದಾಯಿಸಿಕೊಂಡವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ. ಗ್ರಾಹಕರಿಗೆ ದರ ಕಡಿತದ ಲಾಭ ಏಪ್ರಿಲ್​ನಲ್ಲಿ ಬರುವ ಬಿಲ್​​ನಲ್ಲಿ ಬರುವುದಿಲ್ಲ. ಮೇ ತಿಂಗಳಿನಲ್ಲಿ ಬರುವ ಬಿಲ್​ನಲ್ಲಿ ಈ ದರ ಅನ್ವಯವಾಗಲಿದೆ.

LEAVE A REPLY

Please enter your comment!
Please enter your name here