ನಾಮಪತ್ರ ಸಲ್ಲಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಏ.4ರಂದು  ನಾಮಪತ್ರ ಸಲ್ಲಿಸಿದರು.

ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್  ಅವರು ನಾಮಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ ,ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮತ್ತಿತರರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಸುವ ಮುಂಚಿತವಾಗಿ  ಸಾಗಿದ ಮೆರವಣೆಗೆಯಲ್ಲಿ  ಬೃಜೇಶ್ ಚೌಟ ಅವರ ಜೊತೆ ಪಕ್ಷದ ಪ್ರಮುಖ ರಾದ ಸುನಿಲ್ ಕುಮಾರ್, ಸಿ.ಟಿ. ರವಿ, ಸಂಸದ ನಳಿನ್ ಕುಮಾರ್ ಕಟೀಲ್, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ.‌ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇದ್ದರು.

LEAVE A REPLY

Please enter your comment!
Please enter your name here