ಮಂಗಳೂರು(ತೀರ್ಥಹಳ್ಳಿ): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಸ್ಥಳೀಯ ಬಿಜೆಪಿ ಮುಖಂಡನ ವಿಚಾರಣೆ ನಡೆಸಿದೆ.
ಬಿಜೆಪಿ ನಗರ ಘಟಕದ ಮುಖಂಡನ ವಿಚಾರಣೆ ನಡೆದಿದ್ದು, ಈತ ಸ್ಫೋಟ ಪ್ರಕರಣದಲ್ಲಿ ಶಂಕಿತರಾಗಿರುವ ವ್ಯಕ್ತಿಗಳ ಜೊತೆ ಸಂಬಂಧ ಹೊಂದಿದ್ದಾನೆ ಎಂದು ಹೇಳಲಾಗಿದೆ. ಈ ಹಿಂದೆ, ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುವ ಇಬ್ಬರು ಯುವಕರಿಗೆ ಸಂಬಂಧಿಸಿದ ಅಂಗಡಿ, ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದರು.