ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಸ್‌ಡಿಪಿಐ ಸ್ಪರ್ಧೆ ಇಲ್ಲ: ಎಸ್‌ಡಿಪಿಐ ದ.ಕ.ಜಿಲ್ಲಾಧ್ಯಕ್ಷ ಅನ್ವರ್ ಸಾದತ್ – ಮುಸ್ಲಿಂ ಮತವಿಭಜನೆಯಾಗದಂತೆ ತಡೆಯಲು ಚುನಾವಣಾ ಕಣದಿಂದ ಹಿಂದೆ ಸರಿದ ಎಸ್‌ಡಿಪಿಐ

ಪುತ್ತೂರು/ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಮತವಿಭಜನೆಯಾಗದಂತೆ ಮಾಡುವ ಉದ್ಧೇಶದಿಂದ ಎಸ್‌ಡಿಪಿಐ ದ.ಕ.ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಎಸ್‌ಡಿಪಿಐ ದ.ಕ.ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ತಿಳಿಸಿದ್ದಾರೆ. ಮಾಧ್ಯಮವೊಂದರಲ್ಲಿ ಹೇಳಿಕೆ ನೀಡಿದ ಅವರು 10 ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನವಿರೋಧಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ನಮ್ಮ ಗುರಿಯಾಗಿದೆ. ಬಿಜೆಪಿ ಪಕ್ಷವು ತನಿಖಾಸಂಸ್ಥಗಳನ್ನು ದುರುಪಯೋಗಪಡಿಸುವುದು. ರಾಜಕೀಯವಾಗಿ ಮುಖಂಡರುಗಳನ್ನು ದಮನ ಮಾಡುತ್ತಿದೆ. ಬಿಜೆಪಿಯನ್ನು ಸೋಲಿಸಬೇಕೆಂದು ಎಲ್ಲರಿಗೂ ಇದೆ. ಸಂವಿಧಾನ ಅಲ್ಲದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಿಜೆಪಿಯಿಂದ ಧಕ್ಕೆ ಬರುತ್ತಿದೆ. ಈ ಎಲ್ಲಾ ವಿಚಾರಗಳನ್ನು ಇಟ್ಟುಕೊಂಡು ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುವುದು ಬೇಡ ಎಂದು ತೀರ್ಮಾನ ಮಾಡಲಾಗಿದೆ. ಬಿಜೆಪಿಯನ್ನು ಸೋಲಿಸಬೇಕೆಂಬ ಉದ್ಧೇಶದಿಂದ ಕರ್ನಾಟಕದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇವೆ ಎಂದು ತಿಳಿಸಿದ್ದಾರೆ.

ಬೆಂಬಲದ ಬಗ್ಗೆ ನಿರ್ಧಾರವಾಗಿಲ್ಲ: ಆದರೆ ಚುನಾವಣೆಯಲ್ಲಿ ಯಾರಿಗೆ ಬೆಂಬಲ ಕೊಡಬೇಕೆಂದು ನಿರ್ಧಾರ ಮಾಡಿಲ್ಲ. ಕಾಂಗ್ರೆಸ್ ಅಲ್ಲದೆ ಇತರ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದೆ. ಚುನಾವಣೆ ಸಮೀಪಿಸಿದಾಗ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here