ಮಂಗಳೂರು: ಬೆಳ್ತಂಗಡಿ ಇಂದಬೆಟ್ಟು ಗ್ರಾಮದ ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್ ಎಂಬವರುಗಳು ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಬೆಳ್ತಂಗಡಿ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಮುರಳೀಧರ್ ಕೆ.ಜಿ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಿಸುತ್ತಿದ್ದ ಪಿಕಪ್ ಮತ್ತು ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 49/2024 ಕಲಂ: 379 r/w 34 ಐ.ಪಿ.ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.