ಅಮೇರಿಕಾದಲ್ಲಿ ಸ್ನಾತಕೋತ್ತರ ಪದವಿಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿ-ಮೂರು ವಾರಗಳಿಂದ ನಾಪತ್ತೆ-ಇಂದು ಶವವಾಗಿ ಪತ್ತೆ-ಡ್ರಗ್ಸ್ ಗ್ಯಾಂಗ್ ಕೈವಾಡ?

ಮಂಗಳೂರು(ಓಹಿಯೋ): ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2023 ರಲ್ಲಿ ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್‌ನ 25 ವರ್ಷದ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾಗಿರುವುದಾಗಿ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ತಿಳಿಸಿದೆ.

ಮೊಹಮ್ಮದ್ ಅಬ್ದುಲ್ ಅರ್ಫಾತ್ ಮೂರು ವಾರಗಳಿಂದ ನಾಪತ್ತೆಯಾಗಿದ್ದಾನೆ. ದೂತಾವಾಸ ಕಚೇರಿ ಅಬ್ದುಲ್ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಪತ್ತೆಹಚ್ಚಲು ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಈ ಹಿಂದೆ ತಿಳಿಸಲಾಗಿತ್ತು. ಎ.9ರಂದು ಬೆಳಗ್ಗೆ ಅರ್ಫಾತ್ ಶವವಾಗಿ ಪತ್ತೆಯಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಅರ್ಫಾತ್ ಅವರು ಓಹಿಯೋದ ಕ್ಲೀವ್ಲ್ಯಾಂಡ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಅವರ ಕುಟುಂಬಕ್ಕೆ ನಮ್ಮ ಆಳವಾದ ಸಂತಾಪಗಳು ಎಂದು ದೂತಾವಾಸವು ಎಕ್ಸ್ ನಲ್ಲಿ ಪೋಸ್ಟಿ ಮಾಡಿದೆ. ಮೊಹಮ್ಮದ್ ಅಬ್ದುಲ್ ಅರ್ಫಾತ್ ಸಾವಿನ ಸಂಪೂರ್ಣ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಅರ್ಫಾತ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಸಾಗಿಸಲು ಕುಟುಂಬಕ್ಕೆ ಎಲ್ಲಾ ರೀತಿಯ ಸಹಾಯವನ್ನು ನೀಡುತ್ತಿದ್ದೇವೆ ಎಂದು ರಾಯಭಾರಿ ಕಚೇರಿ ಹೇಳಿದೆ.

ಮಾರ್ಚ್ 7 ರಂದು ಕೊನೆಯದಾಗಿ ಮಾತನಾಡಿದ್ದ ನಂತರ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು ಎಂದು ಅರ್ಫಾತ್ ತಂದೆ ಮೊಹಮ್ಮದ್ ಸಲೀಂ ಹೇಳಿದ್ದಾರೆ. ಮಾರ್ಚ್ 19 ರಂದು, ಸಲೀಮ್ ಅಪರಿಚಿತ ವ್ಯಕ್ತಿಯಿಂದ ಕರೆ ಸ್ವೀಕರಿಸಿದ್ದು, ಅರ್ಫಾತ್ ನನ್ನು ಡ್ರಗ್ಸ್ ಮಾರಾಟ ಮಾಡುವ ಗ್ಯಾಂಗ್ ಅಪಹರಿಸಿ 1,200 ಡಾಲರ್ ಗೆ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಿದ್ದಾರೆ. ಅಮೇರಿಕಾದಲ್ಲಿ ಪದೇ ಪದೇ ಸಂಭವಿಸುತ್ತಿರುವ ಭಾರತ ಮೂಲದ ವಿದ್ಯಾರ್ಥಿಗಳ ನಿಗೂಢ ಸಾವಿನ ಪ್ರಕರಣಗಳು ಆತಂಕಕ್ಕೆ ಕಾರಣವಾಗಿದೆ.

LEAVE A REPLY

Please enter your comment!
Please enter your name here