ಸೇತುವೆಯಿಂದ ಬಿದ್ದ ಬಸ್ – ಐವರು ದಾರುಣ ಸಾವು

ಮಂಗಳೂರು/ಒಡಿಶಾ: ಎ.15ರ ಸಂಜೆ ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದ ಪರಿಣಾಮ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಜ್‌ಪುರದ ಪೊಲೀಸ್ ಅಧೀಕ್ಷಕರು, ವೈದ್ಯರ ತಂಡ ಮತ್ತು ಇತರ ಜಿಲ್ಲಾಡಳಿತ ಅಧಿಕಾರಿಗಳು ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು. ಅಗ್ನಿಶಾಮಕ ಸಿಬ್ಬಂದಿ ಗ್ಯಾಸ್ ಕಟರ್ ಬಳಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಸಂತಾಪ ಸೂಚಿಸಿದ್ದು, ಮೃತ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here