ಕೇಂದ್ರ ಲೋಕಸೇವಾ ಆಯೋಗ 2023 ಫಲಿತಾಂಶ ಪ್ರಕಟ – 180 ಐಎಎಸ್, 200 ಐಪಿಎಸ್‌ – ಪಟ್ಟಿ ಇಲ್ಲಿದೆ

ಮಂಗಳೂರು/ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ 2023ರ ಸೆಪ್ಟೆಂಬರ್‌ನಲ್ಲಿ ನಡೆಸಿದ್ದ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಮಂಗಳವಾರ(ಎ.16) ಪ್ರಕಟಿಸಿದೆ.

ಪರೀಕ್ಷೆಯಲ್ಲಿ ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ ಪ್ರಥಮ ಸ್ಥಾನ ಪಡೆದಿದ್ದಾರೆ. ಅನಿಮೇಶ್‌ ಪ್ರಧಾನ್‌ ದ್ವಿತೀಯ ಹಾಗೂ ಡೋಣೂರು ಅನನ್ಯಾ ರೆಡ್ಡಿ ತೃತೀಯ ಸ್ಥಾನಗಳಿಸಿದ್ದಾರೆ. ಒಟ್ಟು 1,016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅವರನ್ನು ಕೇಂದ್ರದ ವಿವಿಧ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ. ಫಲಿತಾಂಶವನ್ನು ಯುಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು ಎಂದು ಆಯೋಗ ಹೇಳಿದೆ. ಐಎಎಸ್‌, ಐಎಫ್‌ಎಸ್‌ ಮತ್ತು ಐಪಿಎಸ್‌ ಸೇರಿದಂತೆ ಇತರ ಸೇವೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನವನ್ನು ಕೇಂದ್ರ ಲೋಕಸೇವಾ ಆಯೋಗ ನಡೆಸುತ್ತದೆ.

ಕೇಂದ್ರ ಲೋಕಸೇವಾ ಆಯೋಗವು ಒಟ್ಟು 1016 ಹುದ್ದೆಗಳಿಗೆ 2023ರಲ್ಲಿ ಪರೀಕ್ಷೆ ನಡೆಸಿತ್ತು. ಇದರಲ್ಲಿ ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಹಾಗೂ ಎ ಹಾಗೂ ಬಿ ವೃಂದದ ಕೇಂದ್ರ ಸೇವೆಗಳ ಹುದ್ದೆಗಳು ಸೇರಿದ್ದವು. ಇದರಲ್ಲಿ ಸಾಮಾನ್ಯ ವರ್ಗದಿಂದ 347, ಆರ್ಥಿಕವಾಗಿ ದುರ್ಬಲ ವರ್ಗದಿಂದ 115, ಹಿಂದುಳಿದ ವರ್ಗದಿಂದ 303, ಪರಿಶಿಷ್ಟ ಜಾತಿ 165, ಪರಿಶಿಷ್ಟ ಪಂಗಡ 86 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳ ಪಟ್ಟಿ ಇಂತಿದೆ:

UPSC Result

LEAVE A REPLY

Please enter your comment!
Please enter your name here