ಮೆಜೆಸ್ಟಿಕ್ ನಲ್ಲಿ ನೋಡ ನೋಡುತ್ತಿದ್ದಂತೆ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್

ಮಂಗಳೂರು(ಬೆಂಗಳೂರು): ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್ ಗೆ ದಿಢೀರ್ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಮೆಜೆಸ್ಟಿಕ್ನಲ್ಲಿ ನಡೆದಿದೆ.

ಮೆಜೆಸ್ಟಿಕ್ ಪಕ್ಕದಲ್ಲಿ ಇರೋ ಖಾಸಗಿ ಬಸ್‌ಗೆ ಏಕಾಏಕಿ ಬೆಂಕಿ ತಗುಲಿದೆ. ಕೆಲವೇ ಕೆಲ ನಿಮಿಷಗಳಲ್ಲಿಯೇ ಬಸ್‌ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಮೆಜೆಸ್ಟಿಕ್ನ ಅಕ್ಕ ಪಕ್ಕದಲ್ಲೇ ನಿಂತುಕೊಂಡಿದ್ದ ಪ್ರಯಾಣಿಕರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ತಾಂತ್ರಿಕ ಕಾರಣದಿಂದ ಬೆಂಕಿ ಹೊತ್ತಿರಬಹುದು ಎಂದು ಶಂಕಿಸಲಾಗಿದೆ.

LEAVE A REPLY

Please enter your comment!
Please enter your name here