ಚುನಾವಣೆ ವೇಳೆ ನಿಷೇಧಾಜ್ಞೆ ರದ್ದು-ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಮಂಗಳೂರು(ನವದೆಹಲಿ): ಚುನಾವಣೆ ಕಾರಣದಿಂದ ಸಿಆರ್‌ಪಿಸಿ ಸೆಕ್ಷನ್‌ 144 ಅಡಿಯಲ್ಲಿ ಹೇರಲಾಗುವ ನಿಷೇಧಾಜ್ಞೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಶುಕ್ರವಾರ(ಎ.19) ಒಪ್ಪಿಗೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಮತ್ತು ಸಂದೀಪ್‌ ಮೆಹ್ತಾ ಅವರನ್ನು ಒಳಗೊಂಡ ನ್ಯಾಯಪೀಠವು, ‘ಚುನಾವಣೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರ‍್ಯಾಲಿ ಅಥವಾ ಸಾರ್ವಜನಿಕ ಸಭೆಗಳನ್ನು ನಡೆಸಲು ಅನುಮತಿ ನೀಡುವಂತೆ ಅರ್ಜಿ ಸಲ್ಲಿಕೆಯಾದ ಮೂರು ದಿನಗಳ ಒಳಗಾಗಿ ಸಂಬಂಧಿಸಿದ ಅಧಿಕಾರಿಗಳು ತೀರ್ಮಾನ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿತು. ಸಾಮಾಜಿಕ ಕಾರ್ಯಕರ್ತ ಅರುಣ್‌ ರಾಯ್‌ ಮತ್ತು ನಿಖಿಲ್‌ ಡೇ ಅವರು, ‘ಪ್ರತಿ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಫಲಿತಾಂಶ ಘೋಷಣೆಯಾಗುವವರೆಗೆ ಸಭೆ, ಸಮಾರಂಭ, ರ‍್ಯಾಲಿ ಅಥವಾ ಧರಣಿಗಳಿಗೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಧಿಕಾರಿಗಳು ಸಿಆರ್‌ಪಿಸಿ ಸೆಕ್ಷನ್‌ ಅಡಿಯಲ್ಲಿ ನಿಷೇಧ ಹೇರುವ ಕ್ರಮವನ್ನು ರದ್ದು ಮಾಡಬೇಕು‘ ಎಂದು ಕೋರಿದ್ದರು. ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಾಲಯವು ಎರಡು ವಾರಗಳ ನಂತರ ವಿಚಾರಣೆ ನಡೆಸುವುದಾಗಿ ತಿಳಿಸಿತು.

LEAVE A REPLY

Please enter your comment!
Please enter your name here