ತಾಂತ್ರಿಕ ದೋಷ: ಅಸ್ಸಾಂನಲ್ಲಿ 150 ಇವಿಎಂ, 400 ವಿವಿಪ್ಯಾಟ್ ಬದಲಾವಣೆ

ಮಂಗಳೂರು(ಗುವಾಹಟಿ): ಅಸ್ಸಾಂನ ಐದು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ 150 ವಿದ್ಯುನ್ಮಾನ ಮತಯಂತ್ರಗಳು, 400ಕ್ಕೂ ಹೆಚ್ಚು ವಿವಿಪ್ಯಾಟ್‌ಗಳನ್ನು ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು (ಎ.19) ಬೆಳಿಗ್ಗೆ ಮತದಾನ ಆರಂಭವಾಗುವುದಕ್ಕೂ ಮುನ್ನ ಇವಿಎಂಗಳನ್ನು ಪರಿಶೀಲನೆ ನಡೆಸಲಾಯಿತು. ಈ ವೇಳೆ ತಾಂತ್ರಿಕ ದೋಷ ಕಂಡು ಬಂದ ಬೆನ್ನಲ್ಲೇ ಎಚ್ಚೆತ್ತ ಚುನಾವಣಾಧಿಕಾರಿಗಳು ಮತಯಂತ್ರಗಳು, ವಿವಿಪ್ಯಾಟ್‌ಗಳು ಸೇರಿದಂತೆ ವಿವಿಧ ಬ್ಯಾಲೆಟ್ ಯೂನಿಟ್‌ಗಳನ್ನು ಬದಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು ‘ಪಿಟಿಐ’ಗೆ ತಿಳಿಸಿದ್ದಾರೆ. ಯಾವ ಕ್ಷೇತ್ರದಲ್ಲಿ ಎಷ್ಟು ಇವಿಎಂಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು ಎಂಬುದರ ಕುರಿತು ಮಾಹಿತಿ ಹಂಚಿಕೊಳ್ಳಲು ಅಧಿಕಾರಿ ನಿರಾಕರಿಸಿದ್ದಾರೆ. ಲಖಿಂಪುರದ ಬಿಹ್ಪುರಿಯ ಮೂರು ಮತಗಟ್ಟೆಗಳು ಹಾಗೂ ದಿಬ್ರುಗಢದ ನಹರ್ಕಟಿಯಾ, ಹೊಜೈ, ಕಲಿಯಾಬೋರ್ ಮತ್ತು ಬೊಕಾಖಾಟ್‌ನಲ್ಲಿ ತಲಾ ಒಂದು ಇವಿಎಂನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here