ಹೆಬ್ಬಾವಿನ ದೇಹದಲ್ಲಿ 11 ಏರ್ ಗನ್‌ ಬುಲೆಟ್‌ ಪತ್ತೆ

ಮಂಗಳೂರು:ಮಂಗಳೂರಿನಲ್ಲಿ ಹೆಬ್ಬಾವುವೊಂದರ ದೇಹದಲ್ಲಿ ಬರೋಬ್ಬರಿ 11 ಏರ್‌ ಬುಲ್ಲೆಟ್‌ ಪತ್ತೆಯಾಗಿದೆ. ಮಂಗಳೂರಿನ ಆನೆಗುಂಡಿ ಬಳಿ ಹೆಬ್ಬಾವುವೊಂದು ಪರ್ಶಿಯನ್‌ ಬೆಕ್ಕನ್ನು ತಿಂದು ನುಂಗಲಾರದೆ ಸಂಕಷ್ಟಪಡುತ್ತಿರುವುದನ್ನು ಗಮನಿಸಿ ಸ್ಥಳೀಯರು ಉರಗತಜ್ಞರಿಗೆ ಕರೆ ಮಾಡಿದ್ದಾರೆ.

ಹೆಬ್ಬಾವನ್ನು ತಪಾಸಣೆಗೆ ಒಳಪಡಿಸಿದಾಗ ದೇಹದಲ್ಲಿ 11 ಬುಲ್ಲೆಟ್‌ ಪತ್ತೆಯಾಯಿತು.ಹೆಬ್ಬಾವು ಪರ್ಶಿಯನ್‌ ಕ್ಯಾಟ್‌ ತಿನ್ನುವಾಗ ಅದರ ಕತ್ತಿನ ಕೆಳ ಭಾಗದಲ್ಲಿ ಬಲೆ ಸಿಲುಕಿ ನುಂಗಲಾರದೆ ಕಷ್ಟಪಡುತ್ತಿತ್ತು. ಉರಗತಜ್ಞ ಭುವನ್‌ ದೇವಾಡಿಗ ಸ್ಥಳಕ್ಕೆ ಆಗಮಿಸಿ, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು, ಬಳಿಕ ಬಲೆ ತೆರವು ಮಾಡಿ ಹೆಬ್ಬಾವು ರಕ್ಷಿಸಿ ಪಶುವೈದ್ಯ ಡಾ| ಯಶಸ್ವಿ ಅವರಲ್ಲಿ ಹೆಬ್ಬಾವಿಗೆ ಚಿಕಿತ್ಸೆ ನೀಡಲಾಯಿತು.

 ಹೆಚ್ಚಿನ ಚಿಕಿತ್ಸೆಗೆಂದು ಎಕ್ಸ್‌ರೇ ಮಾಡಿಸಿದಾಗ ದೇಹದಲ್ಲಿ 11 ಏರ್‌ ಬುಲ್ಲೆಟ್‌ ಪತ್ತೆಯಾಗಿದೆ. ಕೆಲ ವರ್ಷಗಳ ಹಿಂದೆ ಈ ಹೆಬ್ಬಾವಿಗೆ ಏರ್‌ಗನ್‌ನಿಂದ ಶೂಟ್‌ ಮಾಡಿರಬಹುದು ಎಂದು ಶಂಕಿಸಲಾಗಿದೆ. ಇದೇ ಕಾರಣಕ್ಕೆ ಕೆಲವೊಂದು ಬುಲೆಟ್‌ಗಳ ಮೇಲೆ ಚರ್ಮ ಬೆಳೆದಿತ್ತು. ಎರಡು ಬುಲ್ಲೆಟ್‌ಗಳನ್ನು ಸದ್ಯ ಹೊರತೆಗೆಯಲಾಗಿದೆ. ಹೆಬ್ಬಾವು ಚೇತರಿಸಿಕೊಳ್ಳುತ್ತಿದೆ ಎಂದು ಭುವನ್‌ ದೇವಾಡಿಗ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here