ಮಂಗಳೂರು/ಧಾರವಾಡ: ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ್ ಜೋಶಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಪಮಪತ್ರವನ್ನು ಹಿಂಪಡೆದಿದ್ದಾರೆ.
ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ. ಇದು ಧರ್ಮ ಯುದ್ಧ ಎಂದು ಹೇಳಿದ್ದ ಸ್ವಾಮೀಜಿ, ಸೋಮವಾರ ತಮ್ಮ ಸೂಚಕರಾಗಿದ್ದ ಸಚಿನ್ ಪಾಟೀಲ ಹಾಗೂ ಅಮೃತ ಬಳ್ಳೋಳ್ಳಿ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ಕಳುಹಿಸಿ ಅವರ ಮೂಲಕ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ.