ದಕ್ಷಿಣ ಕನ್ನಡದಲ್ಲಿ ಎ.24ರಿಂದ ಎ. 26ರಂದು ರಾತ್ರಿ 10 ಗಂಟೆಯ ವರೆಗೆ ಪ್ರತಿಬಂಧಕಾಜ್ಞೆ ಜಾರಿ-ಜಿಲ್ಲಾಧಿಕಾರಿ

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಎ. 24ರಂದು ಸಂಜೆ 6ಗಂಟೆಯಿಂದ ಎ. 26ರಂದು ರಾತ್ರಿ 10 ಗಂಟೆಯ ವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ, ಸಮಾರಂಭ ಆಯೋಜಿಸುವುದನ್ನು ನಿಷೇ ಧಿಸಿದೆ. ಚುನಾವಣ ಅಭ್ಯರ್ಥಿ/ ಬೆಂಬಲಿಗರು ಸೇರಿ 5ಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದನ್ನು ನಿರ್ಬಂಧಿ ಸಲಾಗಿದೆ. ಮತದಾನದ ದಿನದಂದು ಮತಗಟ್ಟೆಗಳ 200 ಮೀ. ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇ ಧಿಸಲಾಗಿದೆ. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌ -19ರ ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳಲ್ಲಿ ಚುನಾವಣ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸಬೇಕು. ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೊಟೇಲ್‌ಗ‌ಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿಗಳ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾ ದಂಡಾ ಕಾರಿಗಳೂ ಹಾಗೂ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here