ಕೇರಳದಲ್ಲಿ ಬಹಿರಂಗವಾಗಿ ಕಾಣಿಸಿದ ನಕ್ಸಲರ ತಂಡ-ಚುನಾವಣೆ ಬಹಿಷ್ಕಾರಕ್ಕೆ ಕರೆ

ಮಂಗಳೂರು(ಕೇರಳ): ವಯನಾಡು ಜಿಲ್ಲೆಯ ಕಂಬಮಲೆ ಅರಣ್ಯ ಹಾಗೂ ಮಕ್ಕಿಮಲೆ ಅರಣ್ಯದಲ್ಲಿ ನಕ್ಸಲರು ಇದ್ದಾರೆ ಅನ್ನೋ ಅನುಮಾನ ಬಲವಾಗಿತ್ತು. ಹೀಗಾಗಿ ಕೇರಳದ ನಕ್ಸಲ್ ನಿಗ್ರಹ ತಂಡ ನಿರಂತರ ಕೂಂಬಿಂಗ್ ನಡೆಸಿತ್ತು. ಆದ್ರೆ, ನಕ್ಸಲರ ಸುಳಿವು ಪತ್ತೆಯಾಗದ ಕಾರಣ ಕೂಂಬಿಂಗ್ ನಿಲ್ಲಿಸಲಾಗಿತ್ತು. ಆದ್ರೆ, ಇದೀಗ ಲೋಕಸಭಾ ಚುನಾವಣೆ ವೇಳೆ ಮತ್ತೆ ನಕ್ಸಲರು ಗ್ರಾಮದಲ್ಲಿ ಕಾಣಿಸಿಕೊಂಡಿದ್ದಾರೆ.

ಮಾವೋವಿಸ್ಟ್ ಜಿಂದಾಬಾದ್ ಎಂಬ ಘೋಷಣೆ ಕೂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟು ನಾಲ್ವರ ತಂಡ ಚುನಾವಣೆಗೆ ಬಹಿಷ್ಕಾರ ಮಾಡುವಂತೆ ಕರೆ ನೀಡಿದ್ದಾರೆ. ಗ್ರಾಮಸ್ಥರ ಜೊತೆ ಮಾತನಾಡಿ ಕಳೆದ ನಲುವತ್ತು ವರ್ಷದಿಂದ ಕಂಬಮಲೆ ಅರಣ್ಯ ತಪ್ಪಲಿನ ಜನರ ಸಮಸ್ಯೆಯನ್ನು ಸರ್ಕಾರ ಗಮನಿಸಿಲ್ಲ. ಇಲ್ಲಿ ವಾಸವಾಗಿರುವ ಕೂಲಿ ಕಾರ್ಮಿಕರ ಕಷ್ಟ ಸರ್ಕಾರ ಅರ್ಥ ಮಾಡಿಕೊಂಡಿಲ್ಲ. ಹೀಗಾಗಿ ಎಲ್ಲರೂ ಚುನಾವಣೆ ಬಹಿಷ್ಕಾರ ಮಾಡಿ ಎಂದು ಕರೆ ನೀಡಿದ್ದಾರೆ. ಈ ತಂಡದಲ್ಲಿ ಕೇರಳ ರಾಜ್ಯಕ್ಕೆ ಬಹಳಷ್ಟು ವರ್ಷಗಳಿಂದ ತಲೆ ಮರೆಸಿಕೊಂಡಿರುವ ನಕ್ಸಲರು ಇದ್ದರು ಅನ್ನೋ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ. ಕಂಬಮಲೆ ಎಂಬ ಪ್ರದೇಶದಲ್ಲಿ ಟೀ ಎಸ್ಟೇಟ್ ಇದ್ದು, ಇಲ್ಲಿನ ಕೂಲಿ ಕಾರ್ಮಿಕರ ಜೊತೆ ನಕ್ಸಲರು ಮಾತುಕತೆ ನಡಿಸಿದ ವಿಡಿಯೋ ಈಗ ಪೊಲೀಸರಿಗೆ ಲಭ್ಯವಾಗಿದೆ. ವಿಡಿಯೋ ಮಾಡುತ್ತಿರುವುದು ಗಮನಕ್ಕೆ ಬಂದರೂ ಏನೂ ಮಾತನಾಡದೆ ಶಸಸ್ತ್ರರಾಗಿದ್ದ ನಕ್ಸಲರು ಮಕ್ಕಿಮಲೆ ಕಾಡಿನೊಳಗೆ ಹೋಗಿ ಕಣ್ಮರೆ ಆಗಿದ್ದಾರೆ.

LEAVE A REPLY

Please enter your comment!
Please enter your name here