ಇವಿಎಂ, ವಿವಿ–ಪ್ಯಾಟ್‌ ಮತಗಳ ಹೋಲಿಕೆ-ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಮತ ಎಣಿಕೆ ವೇಳೆ ಇವಿಎಂಗಳಲ್ಲಿನ ಮತಗಳು ಮತ್ತು ವಿವಿ–ಪ್ಯಾಟ್‌ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇಂದು (ಎ.26) ವಜಾಗೊಳಿಸಿದೆ.

ನ್ಯಾಯಾಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಾಂಕರ್‌ ದತ್ತ ಅವರನ್ನು ಒಳಗೊಂಡ ನ್ಯಾಯಪೀಠವು ತೀರ್ಪು ನೀಡಿದೆ. ಲೋಕಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ. ಅರ್ಜಿದಾರರಲ್ಲಿ ಒಬ್ಬರಾಗಿರುವ ಅಸೋಷಿಯೇಷನ್‌ ಫಾರ್‌ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥೆಯು, ಇವಿಎಂಗಳಲ್ಲಿನ ಪಾರದರ್ಶಕ ಗಾಜಿನ ಬದಲು ಅರೆಪಾರದರ್ಶಕ ಗಾಜನ್ನು ಅಳವಡಿಸುವ ಆಯೋಗದ 2017ರ ನಿರ್ಧಾರವನ್ನು ಕೈಬಿಡುವಂತೆ ಹಾಗೂ ಮತಪತ್ರಗಳ ಮೂಲಕ ಮತ ಚಲಾಯಿಸುವ ಪದ್ಧತಿಯನ್ನೆ ಜಾರಿಗೆ ತರುವಂತೆ ಮನವಿ ಮಾಡಿತ್ತು.

LEAVE A REPLY

Please enter your comment!
Please enter your name here