ಮತದಾನಕ್ಕೆ ಮತದಾರರ ಉತ್ತಮ ಪ್ರತಿಕ್ರಿಯೆ-ಚುನಾವಣಾ ಅಧಿಕಾರಿಗಳ ಕ್ರಮಕ್ಕೆ ಶ್ಲಾಘನೆ-ದೇಶದಲ್ಲಿ ಮತ್ತೆ ಮೋದಿ ಸರ್ಕಾರ ಬರಲಿದೆ -ನಳಿನ್ ಕುಮಾರ್

ಮಂಗಳೂರು: ಮತದಾನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದ್ದು ಈ ಬಾರಿ ದೇಶದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಜನತಾ ಪಕ್ಷ ಮೋದಿ ನೇತೃತ್ವದಲ್ಲಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಹೇಳಿದ್ದಾರೆ.

ಲೇಡಿ ಹಿಲ್ ಚರ್ಚ್ ಹಾಲ್ ಬಳಿ ಇರುವ ಮತಗಟ್ಟೆಯಲ್ಲಿ ಮತ ಚಲಾಯಿಸಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಚುನಾವಣಾ ಅಯೋಗ ಉತ್ತಮ ರೀತಿಯಲ್ಲಿ ಚುನಾವಣೆಯನ್ನು ನಿರ್ವಹಿಸುತ್ತಿದೆ. ಹೀಗಾಗಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಮತದಾರರು ಕೂಡಾ ತುಂಬಾ ಉತ್ಸಾಹದಿಂದ ಭಾಗವಹಿಸುವಂತಾಗಿದೆ ಎಂದು ಅಧಿಕಾರಿಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಗೆಲುವಿನ ವಿಶ್ವಾಸವನ್ನು ಹಿಂದೆ ಕೂಡಾ ವ್ಯಕ್ತಪಡಿಸಿತ್ತು ಆದ್ರೆ ಜನ ಬಿಜೆಪಿ ಕೈ ಹಿಡಿದಿದ್ದಾರೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here