ಯುಪಿ ವಿಶ್ವವಿದ್ಯಾನಿಲಯದ ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ ಬರೆದ ವಿದ್ಯಾರ್ಥಿ-ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು

ಮಂಗಳೂರು(ಲಕ್ನೋ): ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಪ್ರಶ್ನೆಗೆ ಉತ್ತರ ಬರೆಯುವ ಬದಲು ಜೈಶ್ರೀರಾಮ್​​​​, ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇದಕ್ಕೆ ಅಲ್ಲಿನ ಶಿಕ್ಷಕರು ಅಂಕವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹಣ ಪಡೆದು ಈ ಉತ್ತರ ಪ್ರತಿಕೆಗೆ ಅಂಕ ನೀಡಲಾಗಿದೆ ಎಂದು ಹೇಳಲಾಗಿದೆ.

ಹಾಡುಗಳು, ಸಂಗೀತ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದಿರುವ ಉತ್ತರ ಪ್ರತಿಕೆಗಳಿಗೆ ಶಿಕ್ಷಕರು ಅಂಕ ನೀಡಿದ್ದು, ಇದೀಗ ಆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಜೌನ್‌ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ವಿಶ್ವವಿದ್ಯಾನಿಲಯದ ಕೆಲವು ಅಧಿಕಾರಿಗಳ ಸಹಕಾರದಿಂದ ಶೂನ್ಯ ಅಂಕ ಪಡೆದ ವಿದ್ಯಾರ್ಥಿಗಳಿಗೆ 60% ಅಂಕವನ್ನು ನೀಡಲಾಗಿದೆ. ಈ ಬಗ್ಗೆ ವಿದ್ಯಾರ್ಥಿ ಮುಖಂಡ ದಿವ್ಯಾಂಶು ಸಿಂಗ್ ಅವರು ಪ್ರಧಾನಿ, ಮುಖ್ಯಮಂತ್ರಿ, ರಾಜ್ಯಪಾಲರು ಹಾಗೂ ಉಪಕುಲಪತಿಗಳಿಗೆ ಬರೆದ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಉತ್ತರ ಪ್ರತಿಕೆಯಲ್ಲಿ ಹಾರ್ದಿಕ್ ಪಾಂಡ್ಯ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಕ್ರಿಕೆಟಿಗರ ಹೆಸರುಗಳು ಕೂಡ ಇದೆ ಎಂದು ಹೇಳಲಾಗಿದೆ.

ಪ್ರತಿಗಳ ಮೌಲ್ಯಮಾಪನದ ಸಮಯದಲ್ಲಿ ಆರ್‌ಟಿಐ ಮೂಲಕ ಪಡೆದ ಮಾಹಿತಿಯಿಂದ ಈ ಅಕ್ರಮ ಬಹಿರಂಗಗೊಂಡಿದೆ ಎಂದು ಹೇಳಲಾಗಿದೆ. ಇಂತಹ ಉತ್ತರ ಪ್ರತಿಕೆಯನ್ನು ಮರುಮೌಲ್ಯಮಾಪನ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾತನಾಡಿದ ಉಪಕುಲಪತಿ ವಂದನಾ ಸಿಂಗ್, ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ನೀಡಲಾಗಿದೆ ಎಂಬ ಆರೋಪವಿತ್ತು. ಹಾಗಾಗಿ ನಾವು ಸಮಿತಿಯನ್ನು ರಚಿಸಿದ್ದೇವೆ. ಆ ಸಮಿತಿಯು ತನ್ನ ವರದಿಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಇನ್ನು ಈ ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ ಬಗ್ಗೆ ಯಾವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಉಪಕುಲಪತಿ ವಂದನಾ ಸಿಂಗ್ ಹೇಳಿದರು. ರಾಜ್ಯಭವನಕ್ಕೂ ಈ ಬಗ್ಗೆ ಪತ್ರ ಬರೆಯಲಾಗಿದ್ದು, ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಇಂತಹ ಘಟನೆ ಪುನರಾವರ್ತನೆಯಾಗದಂತೆ ಶಿಕ್ಷಕರಿಗೆ ಎಚ್ಚರಿಕೆ ನೀಡಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಶಿಕ್ಷಕರನ್ನು ವಜಾಗೊಳಿಸಲು ಸಮಿತಿ ಶಿಫಾರಸು ಮಾಡಿದೆ. ಆದರೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ನೀತಿ ಸಂಹಿತೆ ತೆರವಾದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here