ಮಂಗಳೂರು (ಬೆಂಗಳೂರು): ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಕಳೆದ ರಾತ್ರಿ 1.30ರ ಸುಮಾರಿಗೆ ನಿಧನರಾಗಿದ್ದಾರೆ.
ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯ ಗೊಂಡ ಅವರಿಗೆ ಮಣಿಪಾಲ ಆಸ್ಪತ್ರೆಯ ವೈದ್ಯರಾದ ಡಾ.ಸುದರ್ಶನ್ ಬಲ್ಲಾಳ್, ಡಾ.ಪ್ರಸಾದ್ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ. ಜನತಾ ಪರಿವಾರದಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ ವಿ.ಶ್ರೀನಿವಾಸ್ ಪ್ರಸಾದ್ ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ಪಾರ್ಥೀವ ಶರೀರವನ್ನು ಮೈಸೂರಿಗೆ ತರಲಾಗುತ್ತಿದ್ದು, ವಸ್ತು ಪ್ರದರ್ಶನ ಕೇಂದ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.