ಚಾಮರಾಜನಗರದ ಇಂಡಿಗನತ್ತದಲ್ಲಿ ಏ.29ರಂದು ಮರು ಮತದಾನ – ಗ್ರಾಮಸ್ಥರ ದಾಳಿಯಿಂದ ಹಾನಿಗೀಡಾಗಿದ್ದ ಮತಗಟ್ಟೆ

ಮಂಗಳೂರು (ಚಾಮರಾಜನಗರ): ಶುಕ್ರವಾರ ನಡೆದ ಮತದಾನದ ಸಂದರ್ಭದಲ್ಲಿ ಘರ್ಷಣೆಯಿಂದಾಗಿ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂ ಹಾನಿಗೊಳಗಾದ ಹನೂರು ತಾಲ್ಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ ಏ.29ರಂದು ಮರು ಮತದಾನ ನಡೆಯಲಿದೆ.
ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿರುವ ಈ ಮತಗಟ್ಟೆ ವ್ಯಾಪ್ತಿಯಲ್ಲಿ 528 ಮತದಾರರಿದ್ದಾರೆ. ಶುಕ್ರವಾರ ಇಲ್ಲಿ ಒಂಬತ್ತು ಮಂದಿಯಷ್ಟೇ ಮತದಾನ ಮಾಡಿದ್ದರು.

ಈ ಮಧ್ಯೆ, ಶುಕ್ರವಾರ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು 41 ಗ್ರಾಮಸ್ಥರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ಗ್ರಾಮದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದ್ದು, ತನಿಖಾಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.

LEAVE A REPLY

Please enter your comment!
Please enter your name here