ಮಂಗಳೂರು(ಬೆಂಗಳೂರು): ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ.
ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು ಎಸ್ ಐ ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ. ತನಿಖೆ ನಡೆಸಲು ಸಿಐಡಿ ಎಡಿಜಿಪಿ ಬಿಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಮೊಬೈಲ್ ವಿಡಿಯೋಗಳನ್ನು ಎಫ್ ಎಸ್ ಎಲ್ ಗೆ ರವಾನಿಸಿ ತಂಡ ತನಿಖೆ ಆರಂಭಿಸಲಿದೆ.
ಇತ್ತ ರಾಜ್ಯ ಸರ್ಕಾರ ವಿಶೇಷ ತಂಡ ರಚನೆಯಾದ ಬೆನ್ನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ.