ಮಂಗಳೂರು: ಮಂಗಳೂರಿನಲ್ಲಿ ಎ.30ರ ಬೆಳಗ್ಗೆ 6 ಗಂಟೆಯಿಂದ ಮೇ 1ರ ಬೆಳಗ್ಗೆ 6 ಗಂಟೆಯವರೆಗೆ ನೀರು ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.
ನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದಂದ ಮಂಗಳೂರು ನಗರಕ್ಕೆ ಬರುವ ಕೊಳವೆ ಕಾಮಗಾರಿ ಕೆಲಸ ನಡೆಯಲಿರುವ ಕಾರಣ 24 ಗಂಟೆ ಅವಧಿಯಲ್ಲಿ ನೀರು ಸರಬರಾಜು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಈ ಅವಧಿಯಲ್ಲಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು, ಫಳ್ನೀರ್, ಮುಳಿಹಿತ್ಲು, ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಬಜಾಲ್, ಜೆಪ್ಪಿನಮೊಗರು, ಕಣ್ಣೂರು, ಅಳಪೆ, ಅತ್ತಾವರ, ಉಲ್ಲಾಸ್ ನಗರ, ಚಿಲಿಂಬಿ, ಕೋಡಿಕಲ್, ಊರ್ವಸ್ಟೋರ್, ಅಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು ಮತ್ತು ಮರಕಡ ಭಾಗಶಃ ಇತ್ಯಾದಿ ಪ್ರದೇಶಗಳಿಗೆ ನೀರು ಸರಬರಾಜು ಸ್ಥಗಿತವಾಗಲಿದೆ.