ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ- 2 ಆರಂಭ

ಮಂಗಳೂರು(ಬೆಂಗಳೂರು): ರಾಜ್ಯದಲ್ಲಿ ಇಂದಿನಿಂದ (ಏ.29) ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭವಾಗಿದೆ.

ಸಾಂದರ್ಭಿಕ ಚಿತ್ರ

ಪಿಯುಸಿ ಫಲಿತಾಂಶ ಹೆಚ್ಚಿಸಲು ಈ ವರ್ಷ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆ ಬರೆಯಲು ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಅವಕಾಶ ಕಲ್ಪಿಸಿದೆ. ಈಗಾಗಲೇ ಕಳೆದ ತಿಂಗಳು ಪಿಯುಸಿ ಪರೀಕ್ಷೆ ನಡೆದಿದ್ದು, ಫಲಿತಾಂಶವೂ ಪ್ರಕಟವಾಗಿತ್ತು. ಇದೀಗ ಪಿಯುಸಿ ಪರೀಕ್ಷೆ – 2 ಆರಂಭವಾಗಿದ್ದು, ಮೇ 16 ರವರೆಗೆ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ದಾಖಲೆಯ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ ಪಿಯುಸಿ -2 ಪರೀಕ್ಷೆಗೆ ಒಟ್ಟು149300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here