ಮಂಗಳೂರು(ಬೆಂಗಳೂರು): ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು (ಏ.29) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಆದ್ರೆ, ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ.
ವಾರದ ಹಿಂದೆಯಷ್ಟೇ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ ಆಗಿದ್ದ 91 ವರ್ಷದ ಎಸ್ಎಂ ಕೃಷ್ಣ ಅವರನ್ನು ಮತ್ತೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.