



ಮಂಗಳೂರು(ಬೆಂಗಳೂರು): ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವುದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.







ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ (60) ಮಗಳನ್ನು ಕೊಲೆಗೈದ ತಾಯಿ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. ಈ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಚಾಕುವಿನಿಂದ ಪರಸ್ಪರ ಇರಿದು ಕೊಂಡಿದ್ದರಿಂದ ಮಂಗಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ. ತಾಯಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















