ಪದ್ಮರಾಜ್ ವಿರುದ್ಧ ಅಪಪ್ರಚಾರ, ಮಾನಹಾನಿಕರ ಪೋಸ್ಟ್ ವಿರುದ್ಧ ದೂರು ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆರ್ ಪೂಜಾರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿರುವ ಮತ್ತು ಮಾನಹಾನಿಕರ ಪೋಸ್ಟ್ ಹಾಕಿರುವ 8 ಪ್ರಕರಣಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.

ಈ ಬಗ್ಗೆ ಜಿಲ್ಲಾ ಕಾಂಗ್ರೆಸ್‌ನ ಕಾನೂನು, ಮಾನವ ಹಕ್ಕುಗಳು ಮತ್ತು ಆರ್‌ಟಿಐ ವಿಭಾಗದ ಅಧ್ಯಕ್ಷ ಮನೋರಾಜ್ ರಾಜೀವ್‌ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಜೊತೆಗೆ ಪದ್ಮರಾಜ್ ಅವರ ವಿರುದ್ಧ ಅಪಪ್ರಚಾರ ನಡೆಸಿದವರ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here