ಮಂಗಳೂರು(ಸುಳ್ಯ): ಅರಂತೋಡು ಗ್ರಾಮದ ಎಸ್ ಇ ಅಬ್ದುಲ್ಲಾ (82 ವರ್ಷ) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಈ ವಿಚಾರ ತಿಳಿದ ಕೂಡಲೇ ಅವರ ಸಹೋದರ ಮಹಮ್ಮದ್ ಎಸ್ ಇ ಕೂಡ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಬ್ದುಲ್ಲ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅರಂತೋಡಿನ ಬದ್ರಿಯ ಜುಮ ಮಸ್ಜಿದ್ ಮಾಜಿ ಅಧ್ಯಕ್ಷ ಮಹಮ್ಮದ್ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.