ಪೆನ್‌ ಡ್ರೈವ್‌ ಹಗರಣದ ಮಾಹಿತಿ ಬಿಚ್ಚಿಟ್ಟಿದ್ದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ

ಮಂಗಳೂರು(ಹಾಸನ): ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆಯಾಗಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಕಾರ್ತಿಕ್ ಸಂಸದ ಪ್ರಜ್ವಲ್ ರೇವಣ್ಣ ಕುರಿತು ಪೆನ್ ಡ್ರೈವ್ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಎರಡು ದಿನದ ಹಿಂದೆ ಎಸ್ ಐಟಿ ತನಿಖೆಗೆ ಹಾಜರಾಗುವುದಾಗಿ ಹೇಳಿದ್ದ ಕಾರ್ತಿಕ್ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಪ್ರಜ್ವಲ್‌ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದು, ಅದರಲ್ಲಿ ‘ನಾನು 13 ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ರು, ಹಿಂಸೆ ಕೊಟ್ಟು ಹಲ್ಲೆ ಮಾಡಿದರು. ಆದ್ದರಿಂದ ಕೆಲಸ ಬಿಟ್ಟು ಅವರ ಮನೆಯಿಂದ ಹೊರಬಂದೆ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಕಾರು ಚಾಲಕ ಕಾರ್ತಿಕ್ ನಾಪತ್ತೆಯಾಗಿದ್ದಾರೆ.

LEAVE A REPLY

Please enter your comment!
Please enter your name here