ಮಂಗಳೂರು(ಬೆಂಗಳೂರು): ರಾಜ್ಯ ವಿಧಾನಪರಿಷತ್‌ನ 6 ಸ್ಥಾನಗಳಿಗೆ ಆಯೋಗವು ಚುನಾವಣೆಯನ್ನು ಘೋಷಣೆ ಮಾಡಿದ್ದು, 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.
ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ , ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.
ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ನಾಮಪತ್ರ ಸಲ್ಲಿಕೆಗೆ ಮೇ.16 ಕೊನೆಯ ದಿನವಾಗಿದ್ದು, ಮೇ.20 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.