ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಕೊಟ್ಟಿದ್ದು ಕುಮಾರಸ್ವಾಮಿ – ವಿನಯ್ ಕುಮಾರ್ ಸೊರಕೆ

ಸಾಂದರ್ಭಿಕ ಚಿತ್ರ

ಮಂಗಳೂರು (ರಾಯಚೂರು): ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಕೊಟ್ಟಿದ್ದು ಕುಮಾರಸ್ವಾಮಿ ಎಂದು  ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಗಂಭೀರ ಆರೋಪ ಮಾಡಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ಕುಮಾರಸ್ವಾಮಿ ಅವರೇ ವಿಡಿಯೋ ಕೊಟ್ಟಿದ್ದು ಎಂದು ಹೇಳಿದ ಅವರು ಹಾಸನ, ಮಂಡ್ಯ ಹಾಗೂ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಕಷ್ಟವಾಗಿದೆ. ಅಲ್ಲದೆ ದೇವೇಗೌಡರ ಅಳಿಯ ಡಾ. ಮಂಜುನಾಥ್ ಕೂಡ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ನಾಲ್ಕು ಸ್ಥಾನ ಕಳೆದುಕೊಳ್ಳುವ ಮೂಲಕ ಜೆಡಿಎಸ್ ಮುಕ್ತವಾಗುತ್ತದೆ. ಆಗ ಕುಮಾರಸ್ವಾಮಿ ಜೆಡಿಎಸ್ ಗೆ ಕೊನೆ ಮೊಳೆ ಹೊಡಿತಾರೆ. ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗುವ ಲಕ್ಷಣ ಕಾಣುತ್ತಿದೆ ಎಂದು ಹೇಳಿದ್ದಾರೆ.

 

 

LEAVE A REPLY

Please enter your comment!
Please enter your name here