ಮಂಗಳೂರು(ಬೆಂಗಳೂರು): ರಾಜಧಾನಿ ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಕೊಡಗು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಮೇ 6 ಮತ್ತು 7 ರಂದು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಿನಲ್ಲಿ ತಾಪಮಾನ ಕಡಿಮೆ ಆಗುವ ಸಾಧ್ಯತೆಯಿದೆ. ನಾಳೆಯಿಂದ ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.