ಸಿಟಿ ಸೆಂಟರ್ ಮಾಲ್ ಗೆ ಬಂದ ಮಹಿಳೆ ಕಾಣೆ-ಪ್ರಕರಣ ದಾಖಲು

ಮಂಗಳೂರು: ಏ.28 ರಂದು ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿಯಾದ ಸಫಾನ ಎಂಬವರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಮ್ಮ ತಾಯಿಯೊಂದಿಗೆ ಬಂದವರು ಸಿಟಿ ಸೆಂಟರ್ ಮಾಲ್ ನಿಂದ ಕಾಣೆಯಾಗಿರುತ್ತಾರೆ.

ಈ ಬಗ್ಗೆ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 27 ವರ್ಷದ ಸಫಾನ ಗೆ ಇಬ್ಬರು ಮಕ್ಕಳಿದ್ದು  4.5 ಅಡಿ ಎತ್ತರ, ಬಿಳಿ ಮೈಬಣ್ಣ ಹೊಂದಿದ್ದು, ಕಪ್ಪು ಬಣ್ಣದ ಬುರ್ಖಾ ಧರಿಸಿರುತ್ತಾರೆ. ಬ್ಯಾರಿ, ಕನ್ನಡ, ತುಳು ಭಾಷೆಯನ್ನು ಮಾತನಾಡುತ್ತಾರೆ. ಈ ಚಹರೆಯ ಮಹಿಳೆಯನ್ನು ಎಲ್ಲಿಯಾದರೂ ಕಂಡು ಬಂದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಅಥವಾ ಕಂಟ್ರೋಲ್ ರೂಂ ಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಸಂಪರ್ಕಿಸಬೇಕಾದ ಮೊಬೈಲ್ ನಂಬ್ರ: 9480805338,9480802321,0824-2220516

 

LEAVE A REPLY

Please enter your comment!
Please enter your name here