ಸಿ ಎನ್ ಜಿ ಗ್ಯಾಸ್ ಸಮಸ್ಯೆ – ಸಮಸ್ಯೆ ಪರಿಹಾರಕ್ಕೆ ವಿಪಕ್ಷ ನಾಯಕ ಕೋಟ ಮನವಿ

ಮಂಗಳೂರು(ಉಡುಪಿ): ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಇತ್ಯಾದಿ ಪ್ರದೇಶಗಳಲ್ಲಿ ಸಿ ಎನ್ ಜಿ ಗ್ಯಾಸ್ ನ ಕೊರತೆಯಿಂದಾಗಿ ಬಂಕ್ ಗಳ ಮುಂದೆ ವಾಹನಗಳು ಸರತಿ ಸಾಲಿನಲ್ಲಿ ನಿಂತು ಚಾಲಕರು ಮತ್ತು ಮಾಲಕರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದು ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಸಂಪನ್ಮೂಲ ಸಚಿವ ಹಾರ್ದಿಕ್ ಸಿಂಗ್ ಪುರಿ ಅವರಿಗೆ ಕೂಡಲೇ ಮಧ್ಯೆ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಹಾರ್ದಿಕ್ ಸಿಂಗ್ ಪುರಿ ಅವರು ಸಮಸ್ಯೆ ಸಂಬಂಧ ಹೆಚ್ಚುವರಿ ಸಿ ಎನ್ ಜಿ ಗ್ಯಾಸ್ ಪೂರೈಸಲು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯಲ್ಲಿ ಸಿ ಎನ್ ಜಿ ಗ್ಯಾಸ್ ನ ಸರಬರಾಜಿನ ಜವಾಬ್ದಾರಿ ಅದಾನಿ ಸಂಸ್ಥೆಯದಾಗಿದ್ದು, ತಾಂತ್ರಿಕ ತೊಂದರೆಯಿಂದ ಮತ್ತು ಹೆಚ್ಚುವರಿ ಬೇಡಿಕೆಯಿಂದಾಗಿ ಒಂದಷ್ಟು ಸಮಸ್ಯೆ ಆಗಿದೆ ಎಂದು ಸಂಸ್ಥೆ ಒಪ್ಪಿಕೊಂಡಿದೆ ಮತ್ತು ಸಮಸ್ಯೆಯನ್ನು ಕೂಡಲೇ ಬಗೆಹರಿಸುವುದಾಗಿ ವಿಪಕ್ಷ ನಾಯಕರಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಮಧ್ಯೆ ಅಗತ್ಯ ಬೇಡಿಕೆ ಪರಿಶೀಲಿಸಿ ಪ್ರಸ್ತಾಪನೆ ಸಲ್ಲಿಸಲು ಉಡುಪಿ ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಕೋಟ ಸೂಚಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಅದಾನಿ ಸಂಸ್ಥೆಯ ಮೂಲಕ ಸಿ ಎನ್ ಜಿ ಬಂಕ್ ನಿರ್ಮಿಸಲು ಈ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here