ಮಂಗಳೂರು(ಮಂಡ್ಯ): ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆರೋಗ್ಯ ಇಲಾಖೆಯ ಕ್ವಾಟ್ರಸ್ ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ದಂಧೆ ನಡೆಯುತ್ತಿತ್ತು ಎಂಬ ಖಚಿತ ಮಾಹಿತಿ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ್ದು, ಗರ್ಭಪಾತಕ್ಕೆ ಬಂದಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ.
ಕ್ವಾರ್ಟರ್ಸ್ ಮೇಲೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರವಿಂದ್ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಈ ವೇಳೆ, ಗರ್ಭಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಕೃತ್ಯಕ್ಕೆ ಬಳಸುತ್ತಿದ್ದ ಯಂತ್ರೋಪಕರಣಗಳು ಜಪ್ತಿ ಮಾಡಲಾಗಿದ್ದು, ಮೂವರು ಅರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪಾಂಡವಪುರ ತಾಲೂಕು ಆಸ್ಪತ್ರೆ ಆ್ಯಂಬುಲೆನ್ಸ್ ಚಾಲಕ ಆನಂದ್, ಅದೇ ಆಸ್ಪತ್ರೆಯ ಹೊರಗುತ್ತಿಗೆ ಡಿ ಗ್ರೂಪ್ ಸಿಬ್ಬಂದಿ ಅಶ್ವಿನಿ ಹಾಗೂ ಮತ್ತೊಬ್ಬ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ. ಚಾಲಕ ಆನಂದ್ಗೆ ನೀಡಲಾಗಿದ್ದ ಸರಕಾರಿ ವಸತಿ ಗೃಹದಲ್ಲಿಯೇ ಈ ಕೃತ್ಯ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.