ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್‌ ತಡೆಯಾಜ್ಞೆ

ಮಂಗಳೂರು(ಬೆಂಗಳೂರು): ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ಕೋರ್ಟ್​ ತಡೆಯಾಜ್ಞೆ ನೀಡಿದೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ಸೆಷನ್ಸ್ ಕೋರ್ಟ್‌ ತಡೆಯಾಜ್ಞೆಯನ್ನು ತಂದಿದ್ದಾರೆ.

ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆಗೆ ಬೆಂಗಳೂರಿನ 34ನೇ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಮನವಿ ಮಾಡಲಾಗಿತ್ತು. ಇದನ್ನು ಪರಿಗಣಿಸಿದ ಕೋರ್ಟ್, ಸಾಕ್ಷಿ ಇಲ್ಲದೇ ವಿಡಿಯೋ ಕೇಸ್​​​ನಲ್ಲಿ ಸುದ್ದಿ ಪ್ರಸಾರಿಸುವಂತಿಲ್ಲ ಎಚ್.ಡಿ.ದೇವೇಗೌಡ, ಎಚ್​ಡಿ ಕುಮಾರಸ್ವಾಮಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಬಾರದು. ಸತ್ಯಾಂಶವಿದ್ದು, ಸಾಕ್ಷ್ಯಗಳಿದ್ದರೆ ಮಾತ್ರ ಸುದ್ದಿ ಪ್ರಸಾರ ಮಾಡಬಹುದು ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ವಿಡಿಯೋಗಳ ವೈರಲ್ ಆಗುತ್ತಿದ್ದಂತೆಯೇ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು. ನಮ್ಮ ಕುಟುಂಬಕ್ಕೂ ರೇವಣ್ಣ ಕುಟುಂಬಕ್ಕೂ ಸಂಬಂಧ ಇಲ್ಲ, ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೂ ಸಹ ಈಗ ತಮ್ಮ ಹೆಸರನ್ನು ಬಳಕೆ ಮಾಡದಂತೆ ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.

LEAVE A REPLY

Please enter your comment!
Please enter your name here